ಬೆಳ್ತಂಗಡಿ , ಆಗಸ್ಟ್ 11 : 2019- 20 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯಲ್ಲಿ ಇಲ್ಲಿನ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 5 ನೇ ಬಾರಿಗೆ 100 ಶೇಕಡಾ ಫಲಿತಾಂಶವನ್ನು ಪಡೆದಿದೆ. ವಿದ್ಯಾರ್ಥಿಗಳಾದ ಅವನಿ ಹೆಗ್ಡೆ 593 ಅಂಕ ಪಡೆದು ಪ್ರಥಮ ಸ್ಥಾನ, ಜೋಯಲ್ ಮಸ್ಕರೇನಸ್ 592 ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಪ್ರಿನ್ಸಿಟಾ ಡಿ'ಸೋಜ 590 ಅಂಕದೊಂದಿಗೆ ತೃತಿಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಒಟ್ಟು 12 ಉನ್ನತ ಶ್ರೇಣಿ, 27 ಪ್ರಥಮ ಶ್ರೇಣಿ , 4 ದ್ವಿತೀಯ ಶ್ರೇಣಿ ಪಡೆದು ವಿದ್ಯಾರ್ಥಿಗಳು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಶಾಲೆಯ ಘನತೆಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದವನ್ನು ಶಾಲೆಯ ನೂತನ ಸಂಚಾಲಕರಾದ ಅತಿ ವಂದನೀಯ ಫಾ. ಜೋಸೆಫ್ ಅಲ್ಫೋನ್ಸ್ ಕಾರ್ಡೋಜಾ , ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಜೇಸನ್ ಮೋನಿಸ್ , ಶಿಕ್ಷಕ - ರಕ್ಷಕ ಸಂಘದ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Comments powered by CComment

Home | AboutNews | Contact | Sitemap

Copyright ©2014 www.dioceseofmangalore.com. Powered by eCreators

Contact Us

Bishop's House,
Kodialbail,
Mangalore - 575 003
Phone: +91 824 2440524 (4 lines) 2447933, 2420517
Fax 91-824-2444035

E-Mail: [email protected]