Jul 1 : ಬೆಳ್ತಂಗಡಿ ಹೋಲಿ ರಿಡೀಮರ್ ಶಾಲೆಯಲ್ಲಿ ‘Educating the minds through innovative learning’ ಎಂಬ ಧ್ಯೇಯವಾಕ್ಯವನ್ನು ಅನಾವರಣಗೊಳಿಸುವ ಮೂಲಕ 2021-22 ನೇ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಆನ್ಲೈನ್ ಶಿಕ್ಷಣವನ್ನು ಅಳವಡಿಸಿ ಗುಣಾತ್ಮಕ ಶಿಕ್ಷಣವನ್ನು ನೀಡುವ ಸಲುವಾಗಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಏಕಕಾಲದಲ್ಲಿ ಅಂತರ್ಜಾಲದ ಮೂಲಕ ಸಂಪರ್ಕಿಸಿ ಶೈಕ್ಷಣಿಕ ವರ್ಷದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಜೇಸನ್ ಮೋನಿಸ್ ರವರು ಶಾಲಾ ಚಟುವಟಿಕೆ ಹಾಗೂ ಆನ್ಲೈನ್ ತರಗತಿಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಅಂತರ್ಜಾಲ ಸೌಲಭ್ಯ ತೆಯನ್ನು ದುರ್ಬಳಕೆ ಮಾಡದಂತೆ ಕಿವಿಮಾತು ನೀಡಿದರು.

ಶಾಲಾ ಸಂಚಾಲಕರಾದ ವಂ. ಫಾ. ಜೋಸೆಫ್ ಅಲ್ಫೋನ್ಸ್ ಕಾರ್ಡೋಜರವರು ಸೌಲಭ್ಯತೆಗಳನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಕಲಿಕೆಗೆ ಸಹಕರಿಸಬೇಕೆಂದು ನುಡಿದು ಶುಭಹಾರೈಸಿದರು. ಶಿಕ್ಷಕ ವೃಂದದವರು ಗೀತೆಯ ಮೂಲಕ ಪ್ರಸ್ತುತ ವರ್ಷಕ್ಕೆ ಭಗವಂತನನ್ನು ಪ್ರಾರ್ಥಿಸಿ ಸರ್ವರನ್ನು ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಶಾಂತಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

Comments powered by CComment

Home | AboutNews | Contact | Sitemap

Copyright ©2014 www.dioceseofmangalore.com. Powered by eCreators

Contact Us

Bishop's House,
Kodialbail,
Mangalore - 575 003
Phone: +91 824 2440524 (4 lines) 2447933, 2420517
Fax 91-824-2444035

E-Mail: [email protected]